ತಿರುವನಂತಪುರಂ: ಸಿಎಂ ಪಿಣರಾಯಿ ವಿಜಯನ್ ಅವರು ನನ್ನ ಮೇಲಿನ ಹಲ್ಲೆಗೆ ಪಿತೂರಿ ನಡೆಸಿದ್ದಾರೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆರೋಪಿಸಿದ್ದಾರೆ.
ದೆಹಲಿಗೆ ತೆರಳುವ ಸಲುವಾಗಿ ವಿಮಾನ ನಿಲ್ದಾಣದತ್ತ ಹೊರಟಿದ್ದ ಆರಿಫ್ ಅವರ ವಾಹನವನ್ನು ಸಿಪಿಐ(ಎಂ) ಪಕ್ಷದ ವಿದ್ಯಾರ್ಥಿ ಘಟಕವಾದ ‘ಎಸ್ಎಫ್ಐ’ ಕಾರ್ಯಕರ್ತರು ತಡೆದು, ಕಪ್ಪು ಬಾವುಟ ಪ್ರದರ್ಶಿಸಿದ್ದರು. ಇದರ ಬೆನ್ನಲ್ಲೇ ಆರಿಫ್ ಅವರು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಮುಖ್ಯಮಂತ್ರಿ ಕಾರ್ಯಕ್ರಮ ನಡೆಯುತ್ತಿದ್ದರೆ, ಪ್ರತಿಭಟನಾಕಾರರ ಕಾರುಗಳು ಅತ್ತ ಸಾಗಲು ಪೊಲೀಸರು ಅನುಮತಿ ನೀಡುತ್ತಿದ್ದರೇ? ಮುಖ್ಯಮಂತ್ರಿಯ ಕಾರಿನ ಸಮೀಪಕ್ಕೆ ಯಾರಾದರು ಬರಲು ಬಿಡುತ್ತಿದ್ದರೇ?’ ಎಂದು ಪ್ರಶ್ನಿಸಿದ್ದಾರೆ. ಇಂತಹ ರೌಡಿಗಳು, ಕ್ರಿಮಿನಲ್ಗಳ ವಿರುದ್ಧ ಕ್ರಮ ಕೈಗೊಳ್ಳದಂತೆ ಪೊಲೀಸರನ್ನು ನಿಯಂತ್ರಣದಲ್ಲಿ ಇಡಲಾಗಿದೆ ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ.