ಬೆಳಗಾವಿ ಮಹಿಳೆ ಮೇಲೆ ಹಲ್ಲೆ; ಪ್ರೇಮಿಗಳಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡುತ್ತೆ: ಪರಮೇಶ್ವರ್

Prasthutha|

ಬೆಳಗಾವಿ: ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಈಗಾಗಲೇ 7 ಜನರನ್ನು ಬಂಧಿಸಲಾಗಿದೆ. ಪ್ರೀತಿಸಿ ಗ್ರಾಮ ಬಿಟ್ಟು ಹೋದ ಪ್ರೇಮಿಗಳನ್ನು ಹುಡುಕಿ ಸರ್ಕಾರದಿಂದ ಸೂಕ್ತ ರಕ್ಷಣೆ ಕಲ್ಪಿಸುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

- Advertisement -

ಇಂದು ಶೂನ್ಯವೇಳೆಯಲ್ಲಿ ಪ್ರಕರಣದ ಕುರಿತು ಜರುಗಿದ ಚರ್ಚೆಯಲ್ಲಿ ಮಾತನಾಡಿದ ಅವರು, ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ಇದಾಗಿದೆ. ಗ್ರಾಮದ ಯುವಕ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಈ ಪ್ರೀತಿಗೆ ಹುಡುಗಿಯ ಮನೆಯವರು ವಿರೋಧಿಸಿದ್ದರಿಂದ ಪ್ರೇಮಿಗಳು ಗ್ರಾಮ ಬಿಟ್ಟು ಹೋಗಿದ್ದಾರೆ.

ಈ ವಿಚಾರ ತಿಳಿದ ಹುಡುಗಿಯ ಸಂಬಂಧಿಕರು, ಹುಡುಗನ ಮನೆಗೆ ಆಗಮಿಸಿ, ತಾಯಿ ಹಾಗೂ ವಯಸ್ಸಾದ ಅಜ್ಜಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೇ 55 ವರ್ಷದ ಹುಡುಗನ ತಾಯಿಯನ್ನು ಥಳಿಸಿದ್ದಾರೆ. ಘಟನೆಯ ಬಗ್ಗೆ ತಿಳಿದು ಪ್ರೇಮಿಗಳು ಆತಂಕಕ್ಕೆ ಒಳಗಾಗಿ, ಅನಾಹುತ ಮಾಡಿಕೊಳ್ಳುವ ಮುನ್ನವೇ ಅವರನ್ನು ಪತ್ತೆ ಹಚ್ಚಿ ರಕ್ಷಣೆ ನೀಡುವುದಾಗಿ ಹೇಳಿದರು.



Join Whatsapp