ಪ್ರಧಾನಿ ಕ್ಷೇತ್ರ ವಾರಣಾಸಿಯಿಂದ ಲೋಕಸಭೆ ಚುನಾವಣಾ ಪ್ರಚಾರ ಆರಂಭಿಸಲಿರುವ ಬಿಹಾರ ಸಿಎಂ

Prasthutha|

ಪಾಟ್ನಾ: ಬಿಹಾರ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷಗಳ INDIA ಒಕ್ಕೂಟದ ಸದಸ್ಯ ಪಕ್ಷವಾದ ಜೆಡಿಯು ಮುಖ್ಯಸ್ಥ ಬಿಹಾರ ಸಿಎಂ ನಿತೀಶ್ ಕುಮಾರ್ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಜನಬೆಂಬಲ ಪಡೆಯಲು ದೇಶದ ವಿವಿಧ ರಾಜ್ಯಗಳ ಪ್ರವಾಸ ಕೈಗೊಳ್ಳಲಿದ್ದಾರೆ. ವಾರಣಾಸಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಇದೇ ಡಿಸೆಂಬರ್ 24 ರಂದು ಪ್ರಧಾನಿ ಮೋದಿ ಕ್ಷೇತ್ರದಲ್ಲಿ‌ ಪ್ರಚಾರ ಆರಭಿಸಲಿದ್ದಾರೆ.

- Advertisement -

ಬಳಿಕ ಮಹಾರಾಷ್ಟ್ರ, ಹರಿಯಾಣ, ರಾಜಸ್ಥಾನ, ಜಾರ್ಖಂಡ್ ಮತ್ತು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಮುಂದಿನ ವರ್ಷ ಜನವರಿ 21 ರಂದು ಬಿಹಾರ ಸಿಎಂ ನೆರೆಯ ಜಾರ್ಖಂಡ್‌ನ ರಾಮಗಢದಲ್ಲಿ ಸಾರ್ವಜನಿಕ ರ್ಯಾಲಿ ‘ನಿತೀಶ್ ಜೋಹರ್’ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸೋಮವಾರ, ನಿತೀಶ್ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಿ ಮುಂಬರುವ ಲೋಕಸಭೆ ಚುನಾವಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದರು.

- Advertisement -

ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಚಾರ ಕಾರ್ಯಕ್ರಮಗಳು ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ದೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ
ಜೆಡಿ(ಯು) ರಾಷ್ಟ್ರೀಯ ಮುಖ್ಯ ವಕ್ತಾರ ಕೆ ಸಿ ತ್ಯಾಗಿ ಹೇಳಿದ್ದಾರೆ. ಆದರೆ ನಿತೀಶ್ ಅವರ ಸಾರ್ವಜನಿಕ ಸಭೆಗಳು ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಕಾರ್ಯಸೂಚಿಯನ್ನು ಹೊಂದಿವೆ ಎಂದು ಹೇಳಿದ್ದಾರೆ.



Join Whatsapp