ನವದೆಹಲಿ: ಅಸ್ಸಾಂನಲ್ಲಿ ಅಕ್ರಮ ವಲಸಿಗರಿಗೆ ಭಾರತೀಯ ಪೌರತ್ವ ನೀಡುವುದಕ್ಕೆ ಸಂಬಂಧಿಸಿದ ಪೌರತ್ವ ಕಾಯ್ದೆಯ ಸೆಕ್ಷನ್ 6A ಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಎಂಎಂ ಸುಂದ್ರೇಶ್, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಪೌರತ್ವ ಕಾಯ್ದೆಯಲ್ಲಿ ಸೇರಿಸಲಾದ ಸೆಕ್ಷನ್ 6ಎ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ 17 ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿದೆ.
ಪೀಠವು ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲರಾದ ಶ್ಯಾಮ್ ದಿವಾನ್, ಕಪಿಲ್ ಸಿಬಲ್ ಮತ್ತು ಇತರರ ವಾದಗಳನ್ನು ನಾಲ್ಕು ದಿನಗಳ ಕಾಲ ಆಲಿಸಿದೆ.