ಉಳ್ಳಾಲ: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಸೋಮೇಶ್ವರದ ಸಾರಸ್ವತಕಾಲನಿ ಎಂಬಲ್ಲಿ ಬುಧವಾರ ತಡರಾತ್ರಿ ವೇಳೆ ನಡೆದಿದೆ.
ಸಾರಸ್ವತ ಕಾಲನಿ ನಿವಾಸಿ ವರುಣ್ (28) ಹತ್ಯೆಯಾದವರು.
ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು.
ಇದರಿಂದ ಐದು ಮಂದಿಯ ನಡುವೆ ವಾಗ್ವಾದ ನಡೆದು ಸೂರಜ್ , ವರುಣ್ ಹೃದಯಭಾಗಕ್ಕೆ ಚೂರಿಯಿಂದ ತಿವಿದು ಹತ್ಯೆ ನಡೆಸಿದ್ದಾನೆ.
ಹಳೇ ವೈಷಮ್ಯದಿಂದ ಕೃತ್ಯ ನಡೆದಿರುವ ಸಾಧ್ಯತೆಗಳಿದೆ ಎಂದು ತಿಳಿದು ಬಂದಿದೆ.