ಚಿಕ್ಕಮಗಳೂರು: ಡಿಸೆಂಬರ್ 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿರುವ ಕಾರಣ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.
6 ದಿನ ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಡಿಸೆಂಬರ್ 22ರಿಂದ 27ರವರೆಗೆ ಪ್ರವಾಸಿ ತಾಣಗಳಿಗೆ ನಿರ್ಬಂಧ ಇರಲಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಡಿಸೆಂಬರ್ 26ಕ್ಕೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಡಿಸೆಂಬರ್ 23, 24 ವಾರಾಂತ್ಯ ಇದೆ. 25ರಂದು ಸೋಮವಾರ ಕ್ರಿಸ್ಮಸ್ ಪ್ರಯುಕ್ತ ಸಾರ್ವಜನಿಕ ರಜೆ ಇದೆ. ಹೀಗಾಗಿ ಈ ಸಂದರ್ಭದಲ್ಲಿ ಅನೇಕರು ಪ್ರವಾಸಕ್ಕೆ ಪ್ಲ್ಯಾನ್ ಮಾಡಿರುವ ಸಾಧ್ಯತೆ ಇದ್ದು, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಯೋಚಿಸಿರುವ ಸಾಧ್ಯತೆಯೂ ಇದೆ. ಹೀಗಾಗಿ ಜಿಲ್ಲಾಡಳಿತ ಮುಂಚಿತವಾಗಿಯೇ ಮಾಹಿತಿ ನೀಡಿದೆ.