ಸಂಸತ್ತಿನಲ್ಲಿ ಭದ್ರತಾ ಲೋಪ: ಆರೋಪಿಗಳ ಮೇಲೆ ಯುಎಪಿಎ ಅಡಿ ಕೇಸ್ ದಾಖಲು

Prasthutha|

ನವದೆಹಲಿ: ಸಂಸತ್ ಅಧಿವೇಶಕ್ಕೆ ನುಗ್ಗಿ ಅಶ್ರುವಾಯು ಸಿಡಿಸಿದ ನಾಲ್ವರ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ಜೊತೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

ಇಂದು ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಸಂಸತ್ತಿನಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ಸಮಯದಲ್ಲಿ ವೀಕ್ಷಕರ ಗ್ಯಾಲರಿಯಿಂದ ಜಿಗಿದು, ಅಶ್ರುವಾಯು ಸಿಡಿಸಿರುವ ಘಟನೆ ಇಡಿ ದೇಶವನ್ನೇ ಬೆಚ್ಚಿ ಬೀಳಿಸಿದೆ. ಜತೆಗೆ ಇಲ್ಲಿ ಭದ್ರತಾ ಲೋಪ ಉಂಟಾಗಿದೆ ಎಂಬುದನ್ನು ಸದನ ಒಪ್ಪಿಕೊಂಡಿದೆ.



Join Whatsapp