ಸಂಸತ್ತಿನಲ್ಲಿ ಭದ್ರತಾ ವೈಫಲ್ಯ: ಬೆಳಗಾವಿ ಸುವರ್ಣ ಸೌಧದಲ್ಲಿ ಹೆಚ್ಚಿದ ಭದ್ರತೆ

Prasthutha|

ಬೆಳಗಾವಿ: ಲೋಕಸಭೆಯಲ್ಲಿ ‘ಭದ್ರತಾ ಲೋಪ’ ನಡೆದು ಆಗಂತುಕರು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಬೆಳಗಾವಿಯ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಿಸಿ, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

- Advertisement -

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸುವರ್ಣ ವಿಧಾನಸೌಧದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತಮ್ಮ ಚೇಂಬರ್ ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಎಲ್ಲೆಡೆ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನಗಳನ್ನು ನೀಡಿದರು.



Join Whatsapp