ಲೋಕ ಸಭೆ ಭದ್ರತಾ ಲೋಪ ಪ್ರಶ್ನಿಸಿದ ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ: ಕಾಂಗ್ರೆಸ್‌

Prasthutha|

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ವಿಪಕ್ಷಗಳ 15 ಸಂಸದರನ್ನು ಅಮಾನತುಗೊಳಿಸಲಾಗಿದ್ದು, ಇದಕ್ಕೆ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬಣ್ಣಿಸಿದ್ದಾರೆ.

- Advertisement -

X ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ ಲೋಕ ಸಭೆಯಭದ್ರತಾ ವೈಫಲ್ಯದಂತಹ ಗಂಭೀರ ವಿಚಾರದ ಕುರಿತು ಸರ್ಕಾರವನ್ನು ಪ್ರಶ್ನಿಸಿದ ಸಂಸದರನ್ನೇ ಅಮಾನತು ಮಾಡುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಬಿಜೆಪಿ ಸರ್ಕಾರ ಸಂಸತ್ತನ್ನೂ ‘ರಬ್ಬರ್ ಸ್ಟ್ಯಾಂಪ್‌’ ಹಂತಕ್ಕೆ ಇಳಿಸಿದೆ’ ಎಂದು ಹೇಳಿದ್ದಾರೆ.

ಒಂದು ಕಡೆ ಪ್ರಶ್ನೆ ಮಾಡಿದ ಸಂಸದರನ್ನು ಅಮಾನತುಗೊಳಿಸಲಾಗಿದೆ. ಮತ್ತೊಂದು ಕಡೆ ಆಗಂತುಕನಿಗೆ ಪಾಸ್‌ ನೀಡಲು ಸಹಕರಿಸಿದ್ದ ಸಂಸದನ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹೀಗೆ ಪ್ರಜಾಪ್ರಭುತ್ವವನ್ನು ನಿರ್ದಯವಾಗಿ ಬಲಿಕೊಡಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ವಿಪಕ್ಷಗಳ 15 ಸಂಸದರನ್ನು ಇಂದು ಅಮಾನತು ಮಾಡಲಾಗಿದೆ. ಸದನದ ಬಾವಿಗೆ ಇಳಿದು ಅಶಿಸ್ತಿನ ನಡವಳಿಕೆ ತೋರಿದ ಆರೋಪದ ಮೇಲೆ ಟಿಎಂಸಿ ಸಂಸದ ಡೆರೆಕ್‌ ಒಬ್ರಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದ್ದರೆ, ಕಾಂಗ್ರೆಸ್‌ನಿಂದ 9, ಡಿಎಂಕೆಯಿಂದ ಒಬ್ಬರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ.



Join Whatsapp