ನವದೆಹಲಿ: ಸಂಸತ್ತಿನ ಭದ್ರತೆಯಲ್ಲಿ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಲಲಿತ್ ಝಾರನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ತಡರಾತ್ರಿ ಝಾ ಪೊಲೀಸರಿಗೆ ಶರಣಾಗಿದ್ದಾನೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದರು. ಬುಧವಾರ ಮಧ್ಯಾಹ್ನ ಲೋಕಸಭೆಯ ಶೂನ್ಯ ವೇಳೆಯಲ್ಲಿ ಇಬ್ಬರು ಯುವಕರು ಸದನದೊಳಗೆ ನುಗ್ಗಿ ಸ್ಮೋಕ್ ಬಾಂಬ್ ಎಸೆದಿದ್ದರು, ಇದರಿಂದ ಇಡೀ ಸದನವೇ ದಟ್ಟ ಹೊಗೆಯಿಂದ ಕೂಡಿತ್ತು. ಸಾಗರ್ ಹಾಗೂ ಮನೋರಂಜನ್ ಎಂಬುವವರನ್ನು ತಕ್ಷಣವೇ ಬಂಧಿಸಲಾಗಿತ್ತು.
ಸಂಸತ್ತಿನಲ್ಲಿ ಭದ್ರತಾ ವೈಫಲ್ಯ: ಮಾಸ್ಟರ್ ಮೈಂಡ್ ಲಲಿತ್ ಝಾ ಬಂಧನ
Prasthutha|