ಸಂಸತ್ತಿನಲ್ಲಿ ಭದ್ರತಾ ವೈಫಲ್ಯ: ಇದು ಕಾಂಗ್ರೆಸ್ ಕುತಂತ್ರ ಇರಬಹುದು ಎಂದ ಮುತಾಲಿಕ್

Prasthutha|

ಧಾರವಾಡ: ಸಂಸತ್ತಿನ ಭದ್ರತೆಯಲ್ಲಿ ಲೋಪ ಮಾಡಿದ ಪ್ರಕರಣ ಹಿಂದೆ ಕಾಂಗ್ರೆಸ್ ಕುತಂತ್ರ ಇರಬಹುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

- Advertisement -

ಧಾರವಾಡದಲ್ಲಿ ಮಾತನಾಡಿದ ಅವರು, ಈ ಘಟನೆ ಆಘಾತಕಾರಿ ಆಗಿದೆ, ಪ್ರತಿಭಟನೆಗೆ ಪ್ರಜಾಪ್ರಭುತ್ವದಲ್ಲಿ ಹಕ್ಕಿದೆ. ಆದ್ರೆ, ಇದು ಕಾನೂನು ಬಾಹಿರ ಚಟುವಟಿಕೆ. ಭಯೋತ್ಪಾದಕ ಕೃತ್ಯದ ರೀತಿಯಲ್ಲಿ ನಡೆದಿದೆ, ಇದರ ಹಿಂದೆ ಕಾಂಗ್ರೆಸ್ ಕುತಂತ್ರ ಇರಬಹುದು ಎಂದು ಅನುಮಾನ ವ್ಯಕ್ತಪಡಿದ್ದಾರೆ.

ಬುದ್ಧಿಜೀವಿಗಳ ಮೂಲಕ ಕಾಂಗ್ರೆಸ್ ಹೀಗೆ ಮಾಡಿಸಿರಬಹುದು ಎಂದ ಅವರು, ಸಂಸದ ಪ್ರತಾಪ್ ಸಿಂಹ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಪ್ರತಾಪ್ ಸಿಂಹ ಅವರು ದೇಶಭಕ್ತ ಅವರ ಮೇಲೆ ಆಪಾದನೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.



Join Whatsapp