ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಸಂಸತ್ ಭವನದಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ದೇವೇಗೌಡ ಮತ್ತು ಖರ್ಗೆ ಅವರು ಮಾತುಕತೆ ನಡೆಸಿದರು. ಈ ಬಗ್ಗೆ ಟ್ವೀಟ್ ಮಾಡಿದ ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ, “ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ಸಂಸತ್ತಿನ ಭವನದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು” ಎಂದರು.
Former pm HD deve Gowda met congress president Kharge ji in his chamber in parliament building and had long conversation. @INCIndia pic.twitter.com/svrHXf0J04
— Rajeev Shukla (@ShuklaRajiv) December 15, 2023