ಸಹಕಾರಿ ಬ್ಯಾಂಕ್’ಗಳ ಸಾಲದ ಮೇಲಿನ ಬಡ್ಡಿ ಮನ್ನಾ: ಸಿದ್ದರಾಮಯ್ಯ ಘೋಷಣೆ

Prasthutha|

ಬೆಳಗಾವಿ: ಸಹಕಾರಿ ಬ್ಯಾಂಕ್ ಗಳ ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಘೋಷಿಸಿದ್ದಾರೆ.

- Advertisement -

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು (ಡಿಸೆಂಬರ್ 15) ಈ ಘೋಷಣೆ ಮಾಡಿದ್ದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರಿಗೆ ಬಡ್ಡಿ ಮನ್ನಾ ಆಗಲಿದೆ ಎಂದು ಮಾಹಿತಿ ನೀಡಿದರು.

ಮಧ್ಯಮ ಅವಧಿ, ದೀರ್ಘಾವಧಿ ಸಾಲ ಕಟ್ಟಿದರೆ ಅದರ ಮೇಲಿನ ಬಡ್ಡಿಯನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು ಎದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರದ ಬಡ್ಡಿ ಮನ್ನಾ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದ ರೈತರಿಗೆ ಮಾತ್ರ ಅನ್ವಯವಾಗುತ್ತದೆ.



Join Whatsapp