KSRTC ಟ್ರೇಡ್‌ಮಾರ್ಕ್; ಕರ್ನಾಟಕ ಕೆಎಸ್ ಆರ್ ಟಿಸಿ ಹೆಸರು ಬಳಸಬಹುದು: ಮದ್ರಾಸ್ ಹೈಕೋರ್ಟ್

Prasthutha|

ಚೆನ್ನೈ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಿಗೆ KSRTC ಹೆಸರು ಬಳಕೆ ಮಾಡುತ್ತಿರುವುದನ್ನು ಪ್ರಶ್ನಿಸಿ ಕೇರಳ RTC ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್​ ಹೈಕೋರ್ಟ್​ ವಜಾಗೊಳಿಸಿದ್ದು, ಹೆಸರು ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ನ್ಯಾಯಾಲಯ ಹೇಳಿದೆ.

- Advertisement -

ಕರ್ನಾಟಕ ಪಡೆದಿರುವ KSRTC ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಕೇರಳ RTC ವಾದಿಸಿತ್ತು. KSRTC, ಕೇರಳ RTC ವಾದ ಆಲಿಸಿದ ಮದ್ರಾಸ್​ ಹೈಕೋರ್ಟ್ ​ಕೇರಳ ಸಾರಿಗೆ ಸಂಸ್ಥೆಯ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಭರ್ಜರಿ ಜಯ ಸಿಕ್ಕಿದೆ.



Join Whatsapp