ನವದೆಹಲಿ: ಸಂಸತ್ತಿನಲ್ಲಿ ಕಲಾಪ ನಡೆಯುತ್ತಿದ್ದಾಗಲೇ ಎದುರಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ದೇಶದ ಇಂದಿನ ಪ್ರಮುಖ ಸಮಸ್ಯೆಯೇ ನಿರುದ್ಯೋಗ. ಹಣದುಬ್ಬರ ಮತ್ತು ನಿರುದ್ಯೋಗದಿಂದ ಹತಾಶರಾಗಿರುವ ಯುವಕರಿಂದ ಈ ಕೆಲಸ ಮಾಡಿಸಿದೆ ಎಂದು ಹೇಳಿದ್ದಾರೆ.
ಭದ್ರತಾ ಲೋಪದ ಬಗ್ಗೆ ಇದೇ ಮೊದಲ ಬಾರಿಗೆ ಹೇಳಿಕೆ ನೀಡಿರುವ ಅವರು, ‘ಪ್ರಧಾನ ಮಂತ್ರಿಯವರ ನೀತಿಯಿಂದ ದೇಶದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ’ ಎಂದು ಆರೋಪಿಸಿದ್ದಾರೆ. ಸಂಸತ್ತಿನಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ಸಮಯದಲ್ಲಿ ವೀಕ್ಷಕರ ಗ್ಯಾಲರಿಯಿಂದ ಜಿಗಿದು, ಅಶ್ರುವಾಯು ಸಿಡಿಸಿರುವ ಘಟನೆ ಇಡಿ ದೇಶವನ್ನೇ ಬೆಚ್ಚಿ ಬೀಳಿಸಿದೆ.