ಮಹಾರಾಷ್ಟ್ರ: ನಾಗ್ಪುರದಲ್ಲಿ ಸೋಲಾರ್ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಸುಮಾರು 9.30 ಕ್ಕೆ ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಪ್ಯಾಕಿಂಗ್ ಪ್ರಕ್ರಿಯೆ ವೇಳೆ ಈ ದುರಂತ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಸ್ಫೋಟದ ಪರಿಣಾಮ 9 ಮಂದಿ ಪ್ರಾಣಕಳಕೊಂಡಿದ್ದಾರಲ್ಲದೆ, ಹಲವರಿಗೆ ಗಾಯಗಳಾಗಿವೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ ಎಂದು ವರದಿ ತಿಳಿಸಿದೆ.
ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್ ಕಂಪನಿಯು ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳು ಮತ್ತು ಇತರ ರಕ್ಷಣಾ ಸಾಧನಗಳ ಪೂರೈಕೆಯೊಂದಿಗೆ ವ್ಯವಹರಿಸುತ್ತದೆ ಎಂದು ವರದಿ ತಿಳಿಸಿದೆ.