ಕೇರಳದಲ್ಲಿ ಕೋವಿಡ್ ಹೆಚ್ಚಳ: ನಾಳೆ ತಾಂತ್ರಿಕ ಸಲಹಾ ಸಮಿತಿ ಸಭೆ

Prasthutha|

ಮಂಗಳೂರು, ಮೈಸೂರಿನಲ್ಲಿ ಆತಂಕದ ಛಾಯೆ

- Advertisement -

ಬೆಂಗಳೂರು: ಕೇರಳದಲ್ಲಿ ಮತ್ತೆ ಕೋವಿಡ್ ಹೆಚ್ಚುತ್ತಿದ್ದು, JN.1 ಕೋವಿಡ್ ಹೊಸ ಉಪತಳಿಯೂ ಪತ್ತೆಯಾಗಿದೆ. ಇದು ನೆರೆಯ ಕರ್ನಾಟಕ ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ, ಗಡಿ ಜಿಲ್ಲೆಗಳಾದ ಮಂಗಳೂರು, ಮೈಸೂರು, ಚಾಮರಾಜನಗರದಲ್ಲಿ ಆತಂಕದ ಛಾಯೆ ಆವರಿಸಿದೆ.

ಕೇರಳದಲ್ಲಿ ಸೋಂಕು ಪ್ರಕರಣ ಹೆಚ್ಚಾಗಿರುವುದು ಹಾಗೂ ಹೊಸ ಉಪತಳಿ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ತುರ್ತು ಸಭೆ ನಡೆಸಿ, ಪ್ರಾಥಮಿಕ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಮಂಗಳವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಸಭೆ ಸೇರುತ್ತಿದ್ದು, ಸರ್ಕಾರಕ್ಕೆ ಯಾವ ಯಾವ ನಿಯಂತ್ರಣ ಕ್ರಮ ಕೈಗೊಳ್ಳಲು ಸಲಹೆ ನೀಡಲಿದ್ದಾರೆಂಬ ಕುರಿತು ಕುತೂಹಲ ಮೂಡಿದೆ.

- Advertisement -

ಹೊಸ ವರ್ಷ ಮತ್ತು ಕ್ರಿಸ್‌ಮಸ್ ಹಬ್ಬ ನೋಡಿಕೊಂಡು ಕೊರೊನಾ ಜಾಗೃತಿಗಾಗಿ ಹೊಸ ನಿಯಮ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಉಳ್ಳಾಲ ತಾಲೂಕಿನ ತಲಪಾಡಿ ಮುಖ್ಯ ಗಡಿಯಾಗಿದ್ದು, ಸುಳ್ಯ, ಬಂಟ್ವಾಳ ತಾಲೂಕಿನಲ್ಲಿ ಸಾಕಷ್ಟು ಗಡಿ ಪ್ರದೇಶಗಳು ಇವೆ. ವಿವಿಧ ಕೆಲಸ ಕಾರ್ಯಗಳಿಗೆ ಮಾತ್ರವಲ್ಲದೆ ವಿವಿಧ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಕೇರಳದಿಂದ ಜನರ ಜಿಲ್ಲೆಗೆ ಬಂದು ಹೋಗುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್​ ನಡೆಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. 



Join Whatsapp