ಕೋವಿಡ್ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ಗುಂಡೂರಾವ್ ಸ್ಪಷ್ಟನೆ

Prasthutha|

ಕುಶಾಲನಗರ: ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆದರೆ, ಯಾವುದೇ ನಿರ್ಬಂಧ ಹೇರುವ ಯೋಚನೆ ಸದ್ಯಕ್ಕಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಹೇಳಿದರು.

- Advertisement -

ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಮಾತನಾಡಿದ ಅವರು, ಕೊರೊನಾ ರೂಪಾಂತರಿ ಬಗ್ಗೆ ಯಾರೂ ಸಹ ಆತಂಕಪಡಬೇಕಿಲ್ಲ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹೃದಯ ಸಂಬಂಧಿ ಸಮಸ್ಯೆ ಇದ್ರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.



Join Whatsapp