ಚೆನ್ನೈ: ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆ ಮುಂದುವರಿದಿದೆ. ತೂತುಕುಡಿ, ಕನ್ಯಾಕುಮಾರಿ, ತಿರುನಲ್ವೇಲಿ ಮತ್ತು ತೆಂಕಶಿ ಜಿಲ್ಲೆಗಳ ಹಲವು ಪ್ರದೇಶಗಳು ಜಲಾವೃತಗೊಂಡಿವೆ.
ಈ ಜಿಲ್ಲೆಗಳಿಗೆ ಮತ್ತು ನೆರೆಯ ರಾಜ್ಯ ಕೇರಳಕ್ಕೆ ತೆರಳುವ ರೈಲುಗಳನ್ನು ರದ್ದು ಮಾಡಲಾಗಿದೆ. ತಿರುನೆಲ್ವೇಲಿ ಮತ್ತು ಚೆನ್ನೈ ನಡುವೆ ಸಂಚರಿಸುವ ವಂದೇ ಭಾರತ್ ಸೇರಿದಂತೆ ವಿವಿಧ ರೈಲುಗಳನ್ನು ಭಾರಿ ಮಳೆ ಹಿನ್ನೆಲೆ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆ ಇಲಾಖೆ ತಿಳಿಸಿದೆ.
ತೂತುಕುಡಿ, ಕನ್ಯಾಕುಮಾರಿ, ತಿರುನಲ್ವೇಲಿ ಮತ್ತು ತೆಂಕಶಿ ಜಿಲ್ಲೆಗಳಿಗೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಮೂಲಗಳು ತಿಳಿಸಿವೆ.