ಎರಡು ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಪರಮೇಶ್ವರ್

Prasthutha|

ಬೆಂಗಳೂರು : ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

- Advertisement -

ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಎತ್ತಿನ ಹೊಳೆ ಯೋಜನೆ ಬಗ್ಗೆ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಗೆ ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ನಮ್ಮ ಸರ್ಕಾರವು ಅನುದಾನ ಬಿಡುಗಡೆ ಮಾಡಿದೆ. ಯೋಜನೆಯ ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ 22 ಸಾವಿರ ಕೋಟಿ ರೂ. ಆಗುತ್ತಿದೆ. ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ತಿಳಿಸಿದರು.



Join Whatsapp