ಯತ್ನಾಳ್ ಯಾವ ಪಕ್ಷದಲ್ಲಿ ಇದ್ದಾರೆ ಅನ್ನೋದು ಡೌಟ್: ಬಿಸಿ ಪಾಟೀಲ್ ಕಿಡಿ

Prasthutha|

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಾವ ಪಕ್ಷದಲ್ಲಿದ್ದಾರೆ ಅನ್ನೋ ಅನುಮಾನ ಮೂಡಿಸುತ್ತಿದೆ ಎಂದು ಮಾಜಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ.

- Advertisement -

ಯತ್ನಾಳ್ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಅವರು ಯಾವ ಪಕ್ಷದಲ್ಲಿದ್ದಾರೆ ಅನ್ನೋ ಅನುಮಾನ ಮೂಡಿಸುತ್ತಿದೆ. ವಿಜಯೇಂದ್ರ ಅವರನ್ನು ರಾಜ್ಯಾದ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಯಡಿಯೂರಪ್ಪ ಅವರಲ್ಲ. ಹೈಕಮಾಂಡ್ ನಾಯಕರು ಆಯ್ಕೆ ಮಾಡಿದ್ದಾರೆ.

ರಾಜಸ್ಥಾನದಲ್ಲಿ ಮೊದಲ ಬಾರಿಗೆ ಗೆದ್ದ ಶಾಸಕನಿಗೆ ಸಿಎಂ ಸ್ಥಾನ ಕೊಟ್ಟಿದೆ. ಅಲ್ಲಿನ ಹಿರಿಯ ಘಟಾನುಘಟಿ ನಾಯಕರು, ಮಾಜಿ ಸಿಎಂ ವಸುಂಧರಾ ರಾಜೇ ಅವರು ಅದನ್ನ ಒಪ್ಪಿಕೊಂಡು ಸುಮ್ನೆ ಇದ್ದಾರೆ. ಯತ್ನಾಳ್ ಅವರ ಬದ್ಧತೆ ಯಾರಿಗೆ ಅನ್ನೋದು ನಾವು ಪ್ರಶ್ನೆ ಮಾಡಬೇಕಾಗುತ್ತದೆ. ಹೀಗಾಗಿ ಯತ್ನಾಳ್ ಅವರು ಕೂಡ ಪಕ್ಷದ ಹಿತ ದೃಷ್ಟಿಯಿಂದ ಸೈಲೆಂಟ್ ಆಗಿದ್ದರೆ ಒಳ್ಳೆಯದು ಎಂದು ಹೇಳಿದರು.



Join Whatsapp