ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲಿ: ‘INDIA’ ಸಭೆಯಲ್ಲಿ ಮಮತಾ ಬ್ಯಾನರ್ಜಿ

Prasthutha|

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘INDIA’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಲು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ ಎಂದು ವರದಿಯಾಗಿದೆ.

- Advertisement -

ನವದೆಹಲಿಯ ಅಶೋಕ ಹೋಟೆಲ್‌ನಲ್ಲಿ ಇಂದು ನಡೆದ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ಸಲಹೆಯನ್ನು ಎಂಡಿಎಂಕೆ (ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ) ಸಂಸದ ವೈಕೊ ಬೆಂಬಲಿಸಿದ್ದಾರೆ. ಈ ಬಗ್ಗೆ ಕೇಳಿದಾಗ ಅವರು, ಆ ಸಲಹೆಗೆ ಯಾವುದೇ ವಿರೋಧವಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಹೇಳಿದ್ದಾರೆ.

ಆದರೆ, ಖರ್ಗೆ ಇದನ್ನು ನಿರಾಕರಿಸಿದ್ದಾರೆ. ನಾವು ಮೊದಲು ಚುನಾವಣೆ ಗೆಲ್ಲೋಣ. ಬಳಿಕ ಪ್ರಧಾನಿಯ ಚರ್ಚೆ ಮಾಡೋಣ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಸೋನಿಯಾ ಗಾಂಧಿ, ನಿತೀಶ್ ಕುಮಾರ್ ಮತ್ತು ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವಾರು ‘INDIA’ ನಾಯಕರು ಭಾಗಿಯಾಗಿದ್ದಾರೆ.



Join Whatsapp