ಲಖನೌ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ‘ಯುಪಿ ಜೋಡೊ ಯಾತ್ರೆ’ಯನ್ನು ಆರಂಭಿಸಿದೆ. ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರವಹಿಸಲಿರುವ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಹೆಜ್ಜೆ ಹಾಕಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಅಜಯ್ ರಾಯ್ ಯಾತ್ರೆಗೆ ಚಾಲನೆ ನೀಡಿದ್ದಾರೆ.
ಸಹರನ್ಪುರದ ಶಾಕಂಬರಿ ದೇವಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಅವರು ಚಾಲನೆ ನೀಡಿದರು. ಈ ಮೂಲಕ ಬಿಜೆಪಿಗೆ ಎದಿರೇಟು ನೀಡಲು ಪಕ್ಷವು ಧಾರ್ಮಿಕತೆಯ ಮೊರೆ ಹೋಗಲಿದೆ ಎಂಬ ಸೂಚನೆಯನ್ನು ನೀಡಲಾಗಿದೆ ಎನ್ನಲಾಗಿದೆ.
ಮೊದಲ ಹಂತದಲ್ಲಿ ಯಾತ್ರೆಯು 11 ಜಿಲ್ಲೆಗಳ 15 ಲೋಕಸಭಾ ಕ್ಷೇತ್ರಗಳಿಗೆ ತೆರಳಲಿದೆ ತಿಳಿದುಬಂದಿದೆ.