ನವದೆಹಲಿ: ಸಂಸತ್ತಿನಲ್ಲಿ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಈ ಪೈಕಿ ಲೋಕಸಭೆ ಕಲಾಪದ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದಿದ್ದ ಆರೋಪಿ ಡಿ. ಮನೋರಂಜನ್ ಅವರ ಸಹಪಾಠಿ ಬಾಗಲಕೋಟೆಯ ಸಾಯಿಕೃಷ್ಣ ಮತ್ತು ಉತ್ತರ ಪ್ರದೇಶ ಮೂಲದ ಇನ್ನೊಬ್ಬನನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಪ್ರಶ್ನಿಸಿದೆ ಎಂದು ಮೂಲಗಳು ತಿಳಿಸಿವೆ.