2024ರ ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನ: ಎಚ್ ಕೆ ಪಾಟೀಲ್

Prasthutha|

ಬೆಂಗಳೂರು: 2024ರ ಫೆಬ್ರವರಿಯಲ್ಲಿ ವಿಧಾನಮಂಡಲ ಜಂಟಿ ಮತ್ತು ಬಜೆಟ್ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನು ಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ದಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ 12 ತಿಂಗಳು ಪೌಷ್ಟಿಕ ಆಹಾರ ಉಚಿತವಾಗಿ ಪೂರೈಕೆ ಮಾಡಲಾಗುವುದು ಎಂದರು. ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯ ಕಾರ್ಯಯೋಜನೆ ಹಮ್ಮಿಕೊಳ್ಳಲು ಸಚಿವ ಸಂಪುಟ ಉಪಸಮಿತಿ ರಚಿಸಲು ನಿರ್ಧಾರ ಮಾಡಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಎರಡು ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.



Join Whatsapp