ಕೇಜ್ರಿವಾಲ್‌ಗೆ ಮತ್ತೆ ED ಸಮನ್ಸ್‌

Prasthutha|

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯವು (ED) ಮತ್ತೆ ಸಮನ್ಸ್‌ ಜಾರಿ ಮಾಡಿದೆ. ದೆಹಲಿ ಅಬಕಾರಿ ನೀತಿ ಹಗರಣದ ಜೊತೆಗೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜನವರಿ 3ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ‌ದೆ.

- Advertisement -

ಈ ಹಿಂದೆ ನವೆಂಬರ್‌ 2ರಂದು ಮತ್ತು ಡಿಸೆಂಬರ್‌ 21ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ನೀಡಲಾಗಿತ್ತು. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಇದೀಗ ಮತ್ತೆ ಸಮನ್ಸ್ ನೀಡಲಾಗಿದೆ.



Join Whatsapp