ಮಂಗಳೂರು: ಯುವತಿಯ ಜೊತೆ ನಿಂತಿದ್ದಕ್ಕೆ ಸಂಘಪರಿವಾರದ ಕಾರ್ಯಕರ್ತರು ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ.
ಇಬ್ಬರು ಜೊತೆಯಾಗಿರುವುದನ್ನು ಗಮನಿಸಿದ ಸಂಘಪರಿವಾರದ ಕಾರ್ಯಕರ್ತರು ಯುವಕನನ್ನು ಪ್ರಶ್ನಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೀಡಿಯೋ ಶುಕ್ರವಾರ ವೈರಲ್ ಆಗಿದ್ದು, ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸುತ್ತಿದ್ದಂತೆ ಜೋಡಿ ಮೇಲೆ ಹಲ್ಲೆಗೆ ಯತ್ನಿಸಿದ ಕಾರ್ಯಕರ್ತರು ಸ್ಥಳದಿಂದ ಪರಾರಿ ಆಗಿದ್ದಾರೆ ಎಂದು ತಿಳಿದು ಬಂದಿದೆ.