ದಾವಣಗೆರೆ: ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಹಿಂದೂ ಯುವಕ, ಯುವತಿಯರಿಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.
- Advertisement -
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಬಿಜೆಪಿ ಸರ್ಕಾರದ ಅದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹಿಜಾಬ್ ಆದೇಶ ವಾಪಸ್ ಪಡೆದರೆ ಹಿಂದೂ ಯುವಕರಿಗೆ ಕೇಸರಿ ಶಾಲು ಧರಿಸುವಂತೆ ನಾವೇ ಕರೆ ನೀಡುತ್ತೇವೆ ಎಂದು ತಿಳಿಸಿದರು.