ಫೆ.22ರಂದು ಬಹುಮತ ಸಾಬೀತುಪಡಿಸುವಂತೆ ಪುದುಚೇರಿ ಸಿಎಂ ಗೆ ರಾಜ್ಯಪಾಲರ ಸೂಚನೆ

Prasthutha|

- Advertisement -

ಪುದುಚೇರಿ: ಪುದುಚೇರಿಯ ಹೆಚ್ಚುವರಿ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡ ತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರ್ಯರಾಜನ್ ಅವರು ಫೆಬ್ರವರಿ 22 ರಂದು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕೆಂದು ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರಿಗೆ ಸೂಚಿಸಿದ್ದಾರೆ.
ಬಹುಮತ ಸಾಬೀತುಪಡಿಸಲು ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರಿಗೆ ನಿರ್ದೇಶನ ಕೋರಿ ಪ್ರತಿಪಕ್ಷಗಳು ಸಲ್ಲಿಸಿದ ಮನವಿಯ ಬಗ್ಗೆ ತಮಗೆ ಗೊತ್ತಿದೆ ಎಂದಿದ್ದ ತಮಿಳುಸಾಯಿ ಅವರು ಇಂದು ದಿಢೀರ್ ಬಹುಮತ ಸಾಬೀತುಪಡಿಸುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಸೂಚಿಸಿದ್ದಾರೆ.

- Advertisement -

ಪ್ರಸ್ತುತ, ಕಾಂಗ್ರೆಸ್ ಸರ್ಕಾರಕ್ಕೆ 14 ಶಾಸಕರ ಬೆಂಬಲವಿದ್ದು ಪ್ರತಿಪಕ್ಷ ಕೂಡ 14 ಶಾಸಕರ ಬೆಂಬಲವನ್ನು ಹೊಂದಿದೆ, ಆದುದರಿಂದ ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರಿಗೆ ಫೆ.22ರಂದು ಬಹುಮತ ಸಾಬೀತುಪಡಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಫೆಬ್ರುವರಿ 16ರಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ಅವರನ್ನು ವಜಾ ಮಾಡಲಾಗಿತ್ತು. ಬಳಿಕ ತಮಿಳುಸಾಯಿ ಸೌಂದರರಾಜನ್ ಅವರು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ಹೆಚ್ಚುವರಿ ಜವಾಬ್ದಾರಿ ವಹಿಸಿದ್ದರು.
2016ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 3, ಎಐಎಡಿಎಂಕೆ 7 ಸ್ಥಾನಗಳನ್ನು ಪಡೆದಿತ್ತು. ಆದರೆ ಈಗ ನಾಲ್ವರು ಕಾಂಗ್ರೆಸ್‌ ಶಾಸಕರಿಗೆ ಬಲೆ ಹಾಕಿರುವ ಬಿಜೆಪಿ, ಡಿಎಂಕೆ ಪಕ್ಷದ ಮುಖಂಡರಿಗೂ ಗಾಳ ಹಾಕಿದೆ ಎನ್ನಲಾಗಿದೆ.



Join Whatsapp