ಮಸೀದಿಗೆ ದಾಳಿ: ನಿವೃತ್ತ ಪೊಲೀಸ್ ಅಧಿಕಾರಿ ಮುಹಮ್ಮದ್ ಶಫಿ ಮೃತ

Prasthutha|

ಶ್ರೀನಗರ: ಉಗ್ರರು ನಡೆಸಿದ ದಾಳಿಯಲ್ಲಿ ನಿವೃತ್ತ ಪೊಲೀಸ್​ ಅಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದಿದೆ. ಮುಹಮ್ಮದ್ ಶಫಿ ಮಿರ್ ಮೃತರು. ಮಸೀದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದ್ದು, ದಾಳಿ ನಡೆದ ವೇಳೆ ಇವರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಉಗ್ರರು ಬಾರಾಮುಲ್ಲಾದ ಗಂಟಮುಲ್ಲಾ ಬಾಳ ಪ್ರದೇಶದಲ್ಲಿರುವ ಮಸೀದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಪ್ರಾರ್ಥನೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್​ ವರಿಷ್ಠಾಧಿಕಾರಿ ಮುಹಮ್ಮದ್​ ಶಫಿ ಮಿರ್​ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಬಳಿಕ ಉಗ್ರರು ಪರಾರಿಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ಪ್ರದೇಶವನ್ನು ಪೊಲೀಸರು ಹಾಗೂ ಸೇನೆಯ ಅಧಿಕಾರಿಗಳು ಸುತ್ತುವರೆದಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Join Whatsapp