ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಬ್ರಿಟಿಷರ ಬೂಟು ನೆಕ್ಕುವವರಿಂದ ನಾವು ಕಲಿಯಬೇಕಿಲ್ಲ. ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಹಿಜಾಬ್ ತಲೆ ಮತ್ತೆ ಎದೆ ಮುಚ್ಚಿಕೊಳ್ಳೋಕೆ ಇರೋದು. ಈಗಾಗಲೇ ಕೆಲವು ಶಾಲಾ ಕಾಲೇಜುಗಳಲ್ಲಿ ಇದೆ. ಬುರ್ಖಾ ಅನ್ನೋದು ಸಂಪೂರ್ಣ ದೇಹ ಮುಚ್ಚಿಕೊಳ್ಳೋದು. ಹಿಜಾಬ್ ಮತ್ತು ಭುರ್ಖಾ ಮಧ್ಯೆ ವ್ಯತ್ಯಾಸವಿದೆ. ಶಾಲಾ ಕಂಪೌಂಡ್ ವರೆಗೂ ಬುರ್ಖಾ ಬೇಕಾದವರು ಹಾಕಿಕೊಳ್ಳಲಿ, ಆ ನಂತರ ಹಿಜಾಬ್ ಬೇಕಾದವರು ಹಾಕಿಕೊಳ್ಳಲಿ ಎಂದು ಹೇಳಿದರು.
ಭಾರತೀಯ ಜನತಾ ಪಾರ್ಟಿಯವರು ಸಮಾನತೆ ವಿಚಾರ ಮಾತನಾಡುತ್ತಾರೆ. ಅಹಾರ, ಉಡುಪಿನ ಹಕ್ಕು ಎಲ್ಲರ ವೈಯಕ್ತಿಕ. ಬಿಜೆಪಿಗೆ ರೈತರು, ಮಹಿಳೆಯರ ಶೋಷಣೆ ಬಗ್ಗೆ ಕಾಳಜಿ ಇಲ್ಲ. ಈ ವಿಚಾರ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸಂವಿಧಾನ ರಕ್ಷಣೆ ಮಾಡುತ್ತೀವಿ. ನಮ್ದು ಜ್ಯಾತ್ಯಾತೀತ ರಾಷ್ಟ್ರ, ಎಲ್ಲ ಜಾತಿ ಧರ್ಮಗಳನ್ನು ಕಾಪಾಡಬೇಕು ಎಂದರು.
ಕಾಂಗ್ರೆಸ್ ತುಷ್ಟೀಕರಣ ಮಾಡುತ್ತಿಲ್ಲ. ಬಹು ಸಂಖ್ಯಾತರ ತುಷ್ಟೀಕರಣ ಮಾಡುತ್ತಿವುದು ಬಿಜೆಪಿ. ಹಿಂಸೆ ಮತ್ತು ಸುಳ್ಳುಗಳನ್ನು ಪ್ರಚಾರ ಮಾಡುತ್ತಿರುವುದು ಬಿಜೆಪಿ. ಅಲ್ಪ ಸಂಖ್ಯಾತರು, ಮೀಸಲಾತಿ ವಿಚಾರದಲ್ಲಿ ಇವರು ವಿರೋಧ. ನಾಗಪುರದಲ್ಲಿ ಇರೋ ಇವರ ಸೂತ್ರಧಾರರು ಜಾತಿ ಗಣತಿ ವಿರೋಧಿಗಳು ಎಂದು ಪರೋಕ್ಷವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಾಯಕರ ವಿರುದ್ಧ ಹರಿಪ್ರಸಾದ್ ಹರಿಹಾಯ್ದರು.
ಬಿಜೆಪಿಯವರಿಂದ ನಾವು ಕಲಿಯಬೇಕಾಗಿಲ್ಲ. ನಾವು ಟಿಪ್ಪು ಸುಲ್ತಾನ್ ಪಾರ್ಟ್ ಅಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ. ನಮಗೆ ಟಿಪ್ಪು ಸುಲ್ತಾನ್ ಪರ ಅನ್ನೋರು ಬ್ರಿಟಿಷರ ಬೂಟು ನೆಕ್ಕೋರು. ಪರೋಕ್ಷವಾಗಿ ಬಿಜೆಪಿಯವರು ಬೂಟು ನೆಕ್ಕೋರು ಎಂದು ಅವರು ವ್ಯಂಗ್ಯವಾಡಿದರು.
ನಾನು ಲೋಕಸಭಾ ಚುನಾವಣೆ ಆಕಾಂಕ್ಷಿ.
ನಾನು ಲೋಕಸಭೆ ಚುನಾವಣೆಗೆ ಆಕಾಂಕ್ಷಿಯಾಗಿದ್ದು, ಈ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕಾಯಕ ಸಮಾಜದ ಪರ ಹೋರಾಟ ನಮ್ಮೆಲ್ಲರ ಇಚ್ಛೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆ ಬಗೆಹರಿಬೇಕು. ಇಂಡಿಯಾ ಮೈತ್ರಿ ಕೂಟದಿಂದ ಭಾರತದ ಪ್ರಧಾನಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹೆಸರು ಆಯ್ಕೆ ಸೂಕ್ತವಾಗಿದೆ ಎಂದು ತಿಳಿಸಿದರು.