ಬೆಂಗಳೂರು: ಬಾತ್ ರೂಮ್ ನಲ್ಲಿದ್ದ ಗೀಸರ್ ನ ಗ್ಯಾಸ್ ಸೋರಿಕೆಯಾಗಿ ಯುವತಿಯೋರ್ವಳು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ನಡೆದಿದೆ.
ರಾಜೇಶ್ವರಿ (23) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ವರಿ, ಅಣ್ಣನ ಮದುವೆಗೆ ರಜೆ ಹಾಕಿದ್ದಳು. ಇಂದು ಬೆಳಗ್ಗೆ ಸ್ನಾನ ಮಾಡಲು ಹೋದಾಗ ಗ್ಯಾಸ್ ಗೀಸರ್ ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಬಾತ್ ರೂಮ್ ನಿಂದ ಹೊರಬಾರದ ಕಾರಣಕ್ಕೆ ಬಾಗಿಲು ಬಡಿದಿದ್ದಾರೆ. ಆಗಲೂ ತೆರೆಯದೇ ಇದ್ದಾಗ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ರಾಜೇಶ್ವರಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಆದಾಗಲೇ ರಾಜೇಶ್ವರಿ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ.