ಬಿಕೆ ಹರಿಪ್ರಸಾದ್, ಯತ್ನಾಳ್ ಸೇರಿ ಒಂದು ಪಕ್ಷ ಪ್ರಾರಂಭಿಸುವುದು ಒಳ್ಳೆಯದು: ಬಿಸಿ ಪಾಟೀಲ್

Prasthutha|

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಒಂದು ಪಕ್ಷ ಪ್ರಾರಂಭಿಸುವುದು ಒಳ್ಳೆಯದು ಎಂದು ಮಾಜಿ ಸಚಿವ ಬಿ. ಸಿ ಪಾಟೀಲ್ ಹೇಳಿದ್ದಾರೆ.

- Advertisement -

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮಾಜಿ ಸಚಿವ ಬಿ. ಸಿ ಪಾಟೀಲ್ ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಬಿಕೆ ಹರಿಪ್ರಸಾದ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು ಎಂದಿದ್ದಾರೆ. ಬಿ ಸಿ ಪಾಟೀಲ್ ಅವರ ಈ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಯತ್ನಾಳ್ ತಮ್ಮ ಸ್ವಂತ ಕ್ಷೇತ್ರದ ಬಗ್ಗೆ ಯೋಚನೆ ಮಾಡಿ, ಪಕ್ಷದ ಬಗ್ಗೆ ಅಮೇಲೆ ಯೋಚಿಸಬಹುದು ಎಂದು ತಿರುಗೇಟು ನೀಡಿದ್ದಾರೆ.



Join Whatsapp