ಕೊರೋನಾ ವೇಳೆ ಯಡಿಯೂರಪ್ಪ ಸರ್ಕಾರದಲ್ಲಿ 40 ಸಾವಿರ ಕೋಟಿ ರೂ. ಅವ್ಯವಹಾರ: ಯತ್ನಾಳ್ ಆರೋಪ

Prasthutha|

ವಿಜಯಪುರ: ಕೊರೋನಾ ಮೊದಲನೇ ಅಲೆಯಲ್ಲಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಇದ್ದರು. ಈ ವೇಳೆ 40,000 ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ. ಪ್ರತಿಯೊಬ್ಬ ಕೊರೋನಾ ರೋಗಿಗೆ 8 ರಿಂದ 10 ಲಕ್ಷ ರೂಪಾಯಿ ಬಿಲ್ ಮಾಡಿದ್ದಾರೆ. ನಮ್ಮ ಸರ್ಕಾರವಿದ್ದರೇನು, ಕಳ್ಳರು ಕಳ್ಳರೇ ಅಲ್ಲವಾ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದರು.

- Advertisement -

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ 45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ನಿಗದಿಪಡಿಸಿದರು. ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿದ್ರಿ. ಇದಕ್ಕೆ 10 ಸಾವಿರ ಬೆಡ್ ಬಾಡಿಗೆ ಪಡೆದಿದರು. ಆ ಹಣದಲ್ಲೇ ಬೆಡ್ ಗಳನ್ನು ಖರೀದಿ ಮಾಡಿದ್ದರೆ ಉಳಿಯುತ್ತಿತ್ತು. ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ? ಈ ವಿಚಾರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದಲ್ಲಿ ಹೇಳಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಆದಾಗ ಮಣಿಪಾಲ್ ಆಸ್ಪತ್ರೆಯಲ್ಲಿ 5 ಲಕ್ಷ 80 ಸಾವಿರ ತೆಗೆದುಕೊಂಡರು. ಇಷ್ಟು ಹಣವನ್ನು ಬಡವರಾದವರು ಎಲ್ಲಿಂದ ಕೊಡಬೇಕೆಂದು ವಿಧಾನಸೌಧದಲ್ಲಿ ಮಾತನಾಡಿದ್ದೆ ಎಂದು ತಿಳಿಸಿದರು.



Join Whatsapp