ನಾಮಫಲಕಗಳಲ್ಲಿ ಕನ್ನಡಕ್ಕೆ ಆಗ್ರಹ: ಕರವೇ ವತಿಯಿಂದ ಪ್ರತಿಭಟನೆ

Prasthutha|

►ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: 12ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ

- Advertisement -

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು, 12ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಸಾದಹಳ್ಳಿ ಗೇಟ್ ಬಳಿಯಿಂದ ಜಾಗೃತಿ ಮೆರವಣಿಗೆ ಆರಂಭಿಸಿದ ಸಂದರ್ಭದಲ್ಲಿ ಕಾರ್ಯಕರ್ತರು ಏರ್ಪೋರ್ಟ್ ರಸ್ತೆಯಲ್ಲಿ ಇಂಗ್ಲಿಷ್ ಪದಗಳಿರುವ ನಾಮಫಲಕಗಳನ್ನು ಕಿತ್ತು ಹಾಕಲು ಆರಂಭಿಸಿದರು.
ಸಾದಹಳ್ಳಿಯ ಬ್ಲೂಮ್ ಹೋಟೆಲ್ ಬಳಿ ಲೈಟಿಂಗ್ ಬೋರ್ಡ್ ಒಡೆದು ಹಾಕಿದ್ದಾರೆ.

- Advertisement -


ಚಿಕ್ಕಜಾಲ ವ್ಯಾಪ್ತಿಯಲ್ಲಿರುವ ಅಂಗಡಿ- ಮಳಿಗೆಗಳ ಮೇಲಿದ್ದ ಇಂಗ್ಲಿಷ್ ಫಲಕಗಳನ್ನು ಕಿತ್ತು ಹಾಕಿದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.



Join Whatsapp