ನವದೆಹಲಿ: ‘ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ’ ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಕೇಂದ್ರ ಸರಕಾರ ಬ್ಯಾನ್ ಮಾಡಿದೆ.
‘ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ’ವನ್ನು ‘ಕಾನೂನುಬಾಹಿರ ಸಂಘ’ ಎಂದು ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಈ ಸಂಘಟನೆಯ ಸದಸ್ಯರು ಜಮ್ಮು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಾರೆ ಮತ್ತು ಜಮ್ಮು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
“ನಮ್ಮ ರಾಷ್ಟ್ರದ ಏಕತೆ, ಸಾರ್ವಭೌಮತೆ ಮತ್ತು ಸಮಗ್ರತೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಯಾರನ್ನೂ ಉಳಿಸಲಾಗುವುದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಂದೇಶ ಸ್ಪಷ್ಟವಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.