ಶೇ.60ರಷ್ಟು ಕನ್ನಡ ಬೋರ್ಡ್ ಕಡ್ಡಾಯ: ಫೆ.28ರ ವರೆಗೆ ಡೆಡ್​​ಲೈನ್​ ನೀಡಿದ ಸಿಎಂ

Prasthutha|

- Advertisement -

ಬೆಂಗಳೂರು: ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಪ್ರತಿಭಟನೆ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಂಧನದ ವಿರುದ್ಧ ಕನ್ನಡ ಪರ ಸಂಘಟನೆಗಳು ಸಿಡಿದೆದ್ದಿವೆ.

ಇದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ದಿಢೀರ್ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದರು.

- Advertisement -

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್​ ಇರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು. ನಿಯಮ ಜಾರಿಗೆ ವಿಳಂಬ ಆಗಿರುವುದು ನಿಜ. ಇನ್ಮುಂದೆ ವಿಳಂಬ ಮಾಡದಂತೆ ಕ್ರಮ ವಹಿಸಲಾಗುತ್ತೆ ಎಂದು ಸ್ಪಷ್ಟಪಡಿಸಿದರು.



Join Whatsapp