ಮಂಗಳೂರು: ಡಿ. 30 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ಸೇರಿದಂತೆ 6 ವಂದೇ ಭಾರತ್ ರೈಲುಗಳಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆಯನ್ನು ನೀಡಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನಿಂದ ಚಾಲನೆ ಸಿಗಲಿರುವ ಹಿನ್ನೆಲೆ ಸಂಸದ ನಳಿನ್ ಕುಮಾರ್ ಕಟೀಲ್ ಡಿ.29ರ ಶುಕ್ರವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರವು ಕರ್ನಾಟಕ ದಕ್ಷಿಣ ಭಾಗದ ಒಂದು ಪ್ರಮುಖ ಬಂದರು ಮತ್ತು ವಾಣಿಜ್ಯ ನಗರವಾಗಿದೆ. ಕರಾವಳಿಯ ಎರಡು ನಗರಗಳನ್ನು ಬೆಸೆಯುವ ವಂದೇ ಭಾರತ್ ರೈಲು, ಪ್ರವಾಸೋದ್ಯಮ, ವಾಣಿಜ್ಯ, ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎಂದರು.
ಬಳಿಕ ಹೊಸದಾಗಿ ನಿರ್ಮಾಣವಾಗಿರುವ 4-5ನೇ ಫ್ಲಾಟ್ ಫಾರ್ಮ್ ಗೆ ಭೇಟಿ ನೀಡಿ ಹಾಗೂ ಇದೇ ವೇಳೆ ನಿಲ್ದಾಣದ ಪಿಟ್ ಲೈನ್ ನಲ್ಲಿ ನಿಲ್ಲಿಸಲಾಗಿರುವ ವಂದೇ ಭಾರತ್ ರೈಲನ್ನು ಪರಿಶೀಲಿಸಿದರು.