ಕನ್ನಡ ಹೋರಾಟಗಾರರನ್ನು ಬಿಡುಗಡೆ ಮಾಡದಿದ್ದರೆ ಬೆಂಗಳೂರು ಬಂದ್‌: ಪ್ರವೀಣ್ ಶೆಟ್ಟಿ

Prasthutha|

ಬೆಂಗಳೂರು: ನಾಮ ಫಲಕಗಳಲ್ಲಿ ಕನ್ನಡ ಬಳಕೆಗೆ ಹೋರಾಡಿ ಬಂಧನಕ್ಕೆ ಒಳಗಾಗಿರುವ ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆ ಮಾಡದಿದ್ದರೆ ಬೆಂಗಳೂರು ಬಂದ್‌ಗೆ ಕರೆ ನೀಡಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ( ಮತ್ತೊಂದು ಬಣ) ರಾಜ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

- Advertisement -

ಇಂಗ್ಲಿಷ್ ನಾಮಫಲಕಗಳನ್ನು ಕಿತ್ತು ಬಿಸಾಡಿ, ಮಸಿ ಬಳಿದ ಪ್ರಕರಣದಲ್ಲಿ ಬಂಧಿತರಾಗಿರುವ ಟಿ.ಎ. ನಾರಾಯಣಗೌಡ ಸೇರಿ ಕರ್ನಾಟಕ ರಕ್ಷಣಾ ವೇದಿಕೆಯ 53 ಮಂದಿಯನ್ನು ಬಿಡುಗಡೆಗೆ ಆಗ್ರಹಿಸಿ ಕನ್ನಡಪರ ಹೋರಾಟಗಾರರು ಹಾಗೂ ಸಾಹಿತಿಗಳು ನಗರದಲ್ಲಿ ಸಭೆ ನಡೆಸಿದ ಬಳಿಕ ಪ್ರವೀಣ್ ಶೆಟ್ಟಿ ಹೀಗೆ ಎಚ್ಚರಿಸಿದ್ದಾರೆ‌

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ, ಡಾ.ರಾಜ್‌ಕುಮಾ‌ರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು, ಸಾಹಿತಿಗಳಾದ ಹಂ.ಪ. ನಾಗರಾಜಯ್ಯ, ದೊಡ್ಡರಂಗೇಗೌಡ ಸೇರಿ ವಿವಿಧ ಕನ್ನಡ ಪರ ಸಂಘಟನೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

‘ಅಮಾಯಕ ಕನ್ನಡ ಪರ ಹೋರಾಟಗಾರರು ಹಾಗೂ ನಾಯಕರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡಬೇಕೆಂದು ಸಭೆ ಒತ್ತಾಯಿಸಿದೆ.



Join Whatsapp