ಮುಸ್ಲಿಂ ಸಮುದಾಯದ ವಿರುದ್ಧ ಸರಕಾರಿ ಪ್ರಾಯೋಜಿತ ತಾರತಮ್ಯ: ನಾಳೆ ಮಂಗಳೂರಿನಲ್ಲಿ SDPI ಕಾಲ್ನಡಿಗೆ ಜಾಥಾ, ಪ್ರತಿಭಟನೆ

Prasthutha|

ಮಂಗಳೂರು: ಮುಸ್ಲಿಂ ಸಮುದಾಯದ ವಿರುದ್ಧ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಶುಕ್ರವಾರ ಮಂಗಳೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಮತ್ತು ಪ್ರತಿಭಟನೆ ಹಮ್ಮಿಕೊಂಡಿದೆ.

- Advertisement -

ಮಧ್ಯಾಹ್ಬ 3 ಗಂಟೆಗೆ ನಗರದ ಮಿಲಾಗ್ರಿಸ್ ಚರ್ಚ್ ಬಳಿಯಿಂದ ಆರಂಭವಾಗುವ ಜಾಥಾ ಕ್ಲಾಕ್ ಟವರ್‌ವರಗೆ ಸಾಗಿ ಬಂದು ಮಿನಿ ವಿಧಾನಸೌಧದ ಮುಂಭಾಗ ತಲುಪಲಿದೆ. ಅಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು SDPI ದ.ಕ. ಜಿಲ್ಲಾ ಸಮಿತಿ ತಿಳಿಸಿದೆ.

SDPI ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರ್ ನೇತೃತ್ವದಲ್ಲಿ ನಡೆಯುವ ಜಾಥಾ ಮತ್ತು ಪ್ರತಿಭಟನಾ ಸಭೆಯಲ್ಲಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ದಲಿತ ಸಂಘಟನೆಗಳ ಮುಖಂಡ ಭಾಸ್ಕರ್ ಪ್ರಸಾದ್, ರಾಜ್ಯ ಸಮಿತಿ ಸದಸ್ಯೆ ಸಾಹಿದಾ ತಸ್ನೀಂ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ.

- Advertisement -

ಸರಕಾರದ ತಾರತಮ್ಯ ಧೋರಣೆ ವಿರುದ್ಧ ನಡೆಯುವ ಈ ಪ್ರತಿಭಟನೆಗೆ ಪಕ್ಷ ,ಜಾತಿ ಸಂಘಟನಾ ಭೇದ ಮರೆತು ಎಲ್ಲಾ ಪ್ರಜಾಪ್ರಭುತ್ವ ಪ್ರಿಯರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.



Join Whatsapp