ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Prasthutha|

ಮಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಕಲ್ಲಡ್ಕ ಪ್ರಭಾಕರ್‌ ಭಟ್‌ ಅಶ್ಲೀಲವಾಗಿ ಮಾತನಾಡಿದ್ದು, ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

- Advertisement -

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಭಟ್ ಪರವಾಗಿ ಸೀನಿಯರ್ ವಕೀಲರು ಹಾಜರಾಗದೇ ಇದ್ದಿದ್ದರಿಂದ ಅವರ ಜ್ಯೂನಿಯರ್ ವಕೀಲರು ಸಮಯ ಕೇಳಿದರು. “ಆರೋಪಿ ವಿರುದ್ದ ಚಾರ್ಜ್ ಶೀಟ್ ಸಿದ್ದವಾಗಿದೆ” ಎಂದು ನ್ಯಾಯಾಧೀಶರು ಎಸ್ ಬಾಲನ್ ಅವರಿಗೆ ತಿಳಿಸಿದರು.

- Advertisement -

ಪೊಲೀಸ್ ತನಿಖೆಯಲ್ಲಿ ಆರೋಪ ಸಾಬೀತು ಹಿನ್ನೆಲೆ ದೂರುದಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಎಸ್ ಬಾಲನ್, ಚಾರ್ಜ್ ಶೀಟ್ ಹಿನ್ನೆಲೆಯಲ್ಲಿ ಜಾಮೀನು ರದ್ದು ಮಾಡಬೇಕು ಎಂದು ವಾದ ಮಂಡಿಸಿದ್ದಾರೆ.

ವಿಚಾರಣೆ ಜನವರಿ 10 ಕ್ಕೆ ಮುಂದೂಡಲಾಗಿದೆ.



Join Whatsapp