ಬಿಲ್ಕಿಸ್ ಬಾನು ಪ್ರಕರಣ; ಸುಪ್ರೀಂ ಕೋರ್ಟ್ ತೀರ್ಪಿನಿಂದ ಅಪರಾಧಿಗಳ ರಕ್ಷಕರು ಬಹಿರಂಗ: ರಾಹುಲ್ ಗಾಂಧಿ

Prasthutha|

ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದಲ್ಲಿ 11 ಅಪರಾಧಿಗಳ ಬಿಡುಗಡೆಗೆ ನಿರ್ಧಾರ ಕೈಗೊಂಡಿದ್ದ ಗುಜರಾತ್ ಸರ್ಕಾರದ ನಿರ್ಧಾರವನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ, ‘ಅಪರಾಧಿಗಳನ್ನು ಯಾರು ರಕ್ಷಿಸುತ್ತಿದ್ದಾರೆ ಎಂಬುದು ಈ ತೀರ್ಪು ತೋರಿಸಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

- Advertisement -


ಈ ಬಗ್ಗೆ ಎಕ್ಸ್ ಮಾಡಿರುವ ರಾಹುಲ್ ಗಾಂಧಿ, ಚುನಾವಣಾ ಲಾಭಕ್ಕಾಗಿ ನ್ಯಾಯದ ಕೊಲೆಗೈಯ್ಯುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಅಪರಾಧಿಗಳಿಗೆ ಯಾರು ನೆರವಾಗುತ್ತಿದ್ದಾರೆ ಎಂಬುದನ್ನು ಸುಪ್ರೀಂ ಕೋರ್ಟ್ ನ ಇಂದಿನ ತೀರ್ಪು ಸಾಬೀತುಪಡಿಸಿದೆ ಎಂದಿದ್ದಾರೆ.


ಬಿಲ್ಕಿಸ್ ಬಾನು ಅವರ ಈ ದಣಿವರಿಯದ ಪ್ರಯತ್ನವು ದುರಹಂಕಾರಿ ಬಿಜೆಪಿ ಸರ್ಕಾರದ ವಿರುದ್ಧದ ನ್ಯಾಯದ ಗೆಲುವಾಗಿದೆ ಎಂದಿದ್ದಾರೆ.



Join Whatsapp