ಬಿಡುಗಡೆಯ ತಕ್ಷಣ ಕರವೇ ನಾರಾಯಣಗೌಡ ಮತ್ತೆ ಪೊಲೀಸ್ ವಶಕ್ಕೆ

Prasthutha|

ಬೆಂಗಳೂರು: ಕನ್ನಡ ನಾಮಫಲಕ ಅಳವಡಿಕೆ ಸಂಬಂಧ ಪ್ರತಿಭಟನೆಯಲ್ಲಿ ದಾಂಧಲೆ ಪ್ರಕರಣದಲ್ಲಿ ಜೈಲು ಸೇರಿ ಇಪ್ಪತ್ತು ದಿನಗಳ ಬಳಿಕ ಜಾಮೀನಿನ ಮೇಲೆ ಹೊರ ಬಂದ ನಾರಾಯಣಗೌಡರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

2017ರ ಗಲಾಟೆ ಹಳೇ ಪ್ರಕರಣ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ನಾರಾಯಣಗೌಡರನ್ನು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕ ಆಸ್ತಿ‌ನಾಶ, ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಪ್ರಕರಣದಲ್ಲಿ ನಾರಾಯಣಗೌಡ ವಿರುದ್ಧ ವಾರೆಂಟ್ ಜಾರಿ‌ಯಾಗಿತ್ತು. ಶನಿವಾರ ಪೊಲೀಸರು ಪರಪ್ಪನ ಅಗ್ರಹಾರದ ಬಳಿ ಹೋಗಿದ್ದ ಪೊಲೀಸರು ನಾರಾಯಣಗೌಡರು ಬಿಡುಗಡೆಯಾಗದ ಹಿನ್ನೆಲೆ ಹಿಂದಿರುಗಿದ್ದರು. ಇಂದು ಪರಪ್ಪನ ಅಗ್ರಹಾರದಿಂದ ಹೊರ ಬರುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೈದ್ಯಕೀಯ ಪರೀಕ್ಷೆ ಬಳಿಕ ಕರವೇ ಅಧ್ಯಕ್ಷರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.



Join Whatsapp