ಮೂವರು ಡಿಸಿಎಂ ವಿಚಾರ ಹೈಕಮಾಂಡ್ ಮುಂದೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Prasthutha|

ಕಲಬುರಗಿ: ಮೂವರು ಡಿಸಿಎಂ ವಿಚಾರ ಹೈಕಮಾಂಡ್ ಮುಂದೆ ಇಲ್ಲ. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

- Advertisement -


ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹೆಚ್ಚುವರಿ ಡಿಸಿಎಂ ವಿಚಾರವಾಗಿ ನಮ್ಮ ಮುಂದೆ ಪ್ರಸ್ತಾವನೆ ಇಲ್ಲ. ಹೆಚ್ಚುವರಿ ಡಿಸಿಎಂ ಉಹಾಪೋಹ. ಎಲೆಕ್ಷನ್ ಸಂದರ್ಭದಲ್ಲಿ ಇಂತಹ ವಿಚಾರ ಚರ್ಚೆಗೆ ಬರಬಾರದು. ಸದ್ಯಕ್ಕೆ ಸರ್ಕಾರ ನಡೆಸುವ ಕಡೆ, ಸಮಸ್ಯೆ ಕಡೆ ಗಮನ ಕೊಡಬೇಕು. ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಕಡೆಗೆ ಗಮನ ಕೊಡಬೇಕು. ನಮ್ಮ ಗುರಿ ಮುಟ್ಟುವವರೆಗೆ ಇಂತಹದ್ದಕ್ಕೆ ಅವಕಾಶ ಕೊಡಬಾರದು ಎಂದು ಹೇಳಿದರು.


ಲೋಕಸಭೆ ಚುನಾವಣೆಗೆ ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಗೆ ವಿಚಾರವಾಗಿ ನಾಳೆ (ಜ.10) ರಂದು ಸಭೆ ನಡೆಯಲಿದೆ. ಯಾರನ್ನು ಕಣಕ್ಕಿಳಿಸಬೇಕು ಎಂದು ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಇಂಡಿಯಾ ಒಕ್ಕೂಟ ಒಟ್ಟಾಗಿ ಹೋಗುವ ನಿರ್ಣಯ ಕೈಗೊಂಡಿದ್ದೇವೆ ಎಂದರು.



Join Whatsapp