ಲೋಕಾಯುಕ್ತ ದಾಳಿ: ಗ್ರಾಮ ಪಂಚಾಯತ್ ಸದಸ್ಯನ ಬಳಿ 25 ಕೋಟಿ ರೂ. ಆಸ್ತಿ ಪತ್ತೆ!

Prasthutha|

ಬೆಂಗಳೂರು: ತಾವರೆಕೆರೆ ಹೋಬಳಿಯ ಚನ್ನೇನಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಎಚ್.ಎಸ್.ಸುರೇಶ್ ಬಳಿ ರೂ. 25 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ ಪತ್ತೆಯಾಗಿದೆ.

- Advertisement -

ಇವರಿಗೆ ಸೇರಿದ 6 ಕಡೆಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದರು. ಇದರಲ್ಲಿ 16 ನಿವೇಶನ, 1 ವಾಸದ ಮನೆ, 7.6 ಎಕರೆ ಕೃಷಿ ಜಮೀನು ಸೇರಿ ₹ 21.27 ಕೋಟಿಯಷ್ಟು ಸ್ಥಿರಾಸ್ತಿ ಪತ್ತೆಯಾಗಿದೆ.

₹ 11.97 ಲಕ್ಷ ನಗದು, ₹ 2.11 ಕೋಟಿ ಮೌಲ್ಯದ ಚಿನ್ನಾಭರಣ, ₹ 2.07 ಕೋಟಿ ಮೌಲ್ಯದ ಬೆಲೆಬಾಳುವ ವಾಹನಗಳು ಸೇರಿ ಒಟ್ಟು ₹ 4.30 ಕೋಟಿ ಮೊತ್ತದ ಚರಾಸ್ತಿ ಪತ್ತೆಯಾಗಿದೆ.

- Advertisement -

ರಾಜ್ಯದ ಆರು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.



Join Whatsapp