ಲಕ್ನೋ: ರಾಮಮಂದಿರ ಉದ್ಘಾಟನೆ ಹಿನ್ನೆಲೆ ಜನವರಿ 22ರಂದು ಉತ್ತರ ಪ್ರದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮುಖ್ಯಮಂತ್ರಿ ಆದಿತ್ಯನಾಥ್ ರಜೆ ಘೋಷಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವುದರ ಜೊತೆಗೆ, ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ ವ್ಯವಸ್ಥೆಯನ್ನು ಮಾಡಲು ಆದಿತ್ಯನಾಥ್ ಕರೆ ನೀಡಿದ್ದಾರೆ.