ಲೋಕಸಭೆ ಚುನಾವಣೆ ದೃಷ್ಟಿಯಿಂದ ಮೂರು ಡಿಸಿಎಂ ನೇಮಕ ಆಗಬೇಕು: ಸಚಿವ ಕೆ.ಎನ್.‌ ರಾಜಣ್ಣ

Prasthutha|

ತುಮಕೂರು: ಲೋಕಸಭೆ ಚುನಾವಣೆ ದೃಷ್ಟಿಯಿಂದ ಮೂರು ಡಿಸಿಎಂಗಳ ನೇಮಕ ಆಗಬೇಕು ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

- Advertisement -

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮೂರು ಡಿಸಿಎಂ ನೇಮಕದ ವಿಚಾರವನ್ನು ಪಕ್ಷದ ಉಸ್ತುವಾರಿ ಸುರ್ಜೇವಾಲಾ ಅವರ ಮುಂದೆ ಪ್ರಸ್ತಾಪ ಮಾಡಿದ್ದೇವೆ. ಇನ್ನು ಮುಂದೆ ಈ ಸಂಬಂಧ ಯಾರು ತೀರ್ಮಾನ ತೆಗೆದುಕೊಳ್ಳುತ್ತಾರೋ ಅವರ ಮುಂದೆ ಈ ವಿಚಾರ ಪ್ರಸ್ತಾಪ ಮಾಡಿದರೆ ಸೂಕ್ತ ಎನ್ನುವುದು ನನ್ನ ಭಾವನೆ. ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯ ಗಾಂಧಿ, ರಾಹುಲ್‍ಗಾಂಧಿಯವರ ಮುಂದೆ ಈ ವಿಚಾರದ ಬಗ್ಗೆ ಪ್ರಸ್ತಾಪ ಮಾಡುತ್ತೇವೆ. ನಂತರ ಅವರು ತೀರ್ಮಾನ ಕೈಗೊಳ್ಳುತ್ತಾರೆ. ಹೊಸದಾಗಿ ಡಿಸಿಎಂ ಆಗುವವರು, ಹಾಲಿ ಡಿಸಿಎಂ ಅವರ ಅಧಿಕಾರವನ್ನು ಕಿತ್ತುಕೊಳ್ಳಲ್ಲ ಎಂದು ಕೆ.ಎನ್.ರಾಜಣ್ಣ ಹೇಳಿದರು.



Join Whatsapp