ಬೆಂಗಳೂರು: ಅಲ್ಪಸಂಖ್ಯಾತರ ವೋಟ್ ತಪ್ಪುವ ಆತಂಕದಿಂದ ಅಯೋಧ್ಯೆ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಲ್ಪಸಂಖ್ಯಾತರ ವೋಟ್ ತಪ್ಪುವ ಆತಂಕದಿಂದ ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಯ ಆಹ್ವಾನ ತಿರಸ್ಕರಿಸಿದ್ದಾರೆ. ಈ ಹಿಂದೆಯೂ ಸೋಮನಾಥ ದೇವಸ್ಥಾನ ಉದ್ಘಾಟನೆಗೆ ಹೋಗಿಲ್ಲ. ಕಾಂಗ್ರೆಸ್ ನ ತುಷ್ಟೀಕರಣದ ಪರಾಕಾಷ್ಠೆಯನ್ನು ಜನರು ಗಮನಿಸುತ್ತಿದ್ದಾರೆ ಎಂದು ಜೋಶಿ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ,
— Pralhad Joshi (@JoshiPralhad) January 11, 2024
ಅಯೋಧ್ಯೆಯಲ್ಲಿ ರಾಜಕೀಯ ಮಾಡಲು, ಅಲ್ಲಿ ನಡೆಯುತ್ತಿರುವುದು 140 ಕೋಟಿ ಭಾರತೀಯರ ಅಸ್ಮಿತೆ ಪ್ರಭು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹೊರತು ವಿದೇಶಿ ವ್ಯಕ್ತಿಯೊಬ್ಬ ಸ್ಥಾಪಿಸಿದ ಕಾಂಗ್ರೆಸ್ ಪಕ್ಷದ ಚುನಾವಣಾ ರ್ಯಾಲಿ ಅಲ್ಲ.
ಶ್ರೀರಾಮನ ಮೇಲೆ ನಂಬಿಕೆ ಭಕ್ತಿ ಶ್ರದ್ಧೆ ಇದ್ದವರು ಖಂಡಿತವಾಗಿಯೂ ಯಾವುದೇ… https://t.co/JTRsCk8LyG