ಸ್ವಚ್ಛ ಸರ್ವೇಕ್ಷಣ ಪ್ರಶಸ್ತಿ ಪ್ರಕಟ: ಮಹಾರಾಷ್ಟ್ರ ಸ್ವಚ್ಛ ರಾಜ್ಯ, ಇಂದೋರ್ ಸ್ವಚ್ಛ ನಗರ

Prasthutha|

ನವದೆಹಲಿ: ಕೇಂದ್ರ ಸರ್ಕಾರವು ವಾರ್ಷಿವಾಗಿ ನಡೆಸುವ ಸ್ವಚ್ಛತಾ ಸಮೀಕ್ಷೆಯಲ್ಲಿ ಮಧ್ಯಪ್ರದೇಶದ ಇಂದೋರ್ ಸತತ ಏಳನೇ ಬಾರಿಗೆ ದೇಶದ ಸ್ವಚ್ಛನಗರಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.

- Advertisement -

ಗುಜರಾತ್ ನ ಸೂರತ್ ಎರಡನೇ ಸ್ಥಾನ, ನವಿ ಮುಂಬೈ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ.

ಅತ್ಯುತ್ತಮ ರಾಜ್ಯಗಳ ಪೈಕಿ ಮಹಾರಾಷ್ಟ್ರವು ಅಗ್ರಸ್ಥಾನ ಪಡೆದುಕೊಂಡಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ನಂತರದ ಸ್ಥಾನದಲ್ಲಿದೆ. ಗಂಗಾ ನದಿ ಪಾತ್ರದ ನಗರಗಳ ಪೈಕಿ ವಾರಣಾಸಿ ಮತ್ತು ಪ್ರಯಾಗ್ರಾಜ್ ಮೊದಲೆರಡು ಸ್ಥಾನ ಪಡೆದುಕೊಂಡಿವೆ. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಈ ವೇಳೆ ಉಪಸ್ಥಿತರಿದ್ದರು.



Join Whatsapp