ಮಂಗಳೂರು: ನಗರದ ಜ್ಯುವೆಲ್ಲರಿ ಅಂಗಡಿಯೊಂದಕ್ಕೆ ಗ್ರಾಹಕರಂತೆ ಬಂದು ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ಸುಮಾರು 6 ಲಕ್ಷ ರೂ. ಮೌಲ್ಯದ 97.11 ಗ್ರಾಂ ಚಿನ್ನ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಜನಾಡಿಯ ಮಹಮ್ಮದ್ ಸಿನಾನ್ (25), ಹೈದರ್ಆಲಿ ಆಸಿಲ್(20) ಹಾಗೂ ನಾಟೆಕಲ್ನ ಮೊಹಮ್ಮದ್ ತನ್ವೀರ್( 34 ) ಬಂಧಿತರು.
ಆರೋಪಿಗಳಿಂದ 6 ಲ.ರೂ. ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ ಸ್ಕೂಟರ್, 2 ಮೊಬೈಲ್ ಫೋನ್ಗಳು ಸಹಿತ ಒಟ್ಟು 7.15 ಲ.ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಬಂಧಿತ ಮೊಹಮ್ಮದ್ ತನ್ವೀರ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ಹೈದರ್ಆಲಿ ಆಸಿಲ್ ನ ವಿರುದ್ಧ ಕೋಣಾಜೆ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿಕೆ ನೀಡಿದ್ದಾರೆ.
ಜನವರಿ 3ರಂದು 3ರಂದು ಚಿನ್ನ ಕಳವಾದ ಬಗ್ಗೆ ಮಂಗಳೂರು ಉತ್ತರ ಠಾಣೆಗೆ ದೂರು ನೀಡಲಾಗಿತ್ತು.